ಲಕ್ನೋ: ಉತ್ತರಪ್ರದೇಶದ ರಾಜ್ ಕುಮಾರ್ ವೈಶ್ಯ ಅವರು ವಯಸ್ಸು ಕೇವಲ ನಂಬರ್ ಅಷ್ಟೇ ಎಂಬುದನ್ನು ಸಾಬೀತುಪಡಿಸಿದ್ದಾರೆ. ನಳಂದ ಓಪನ್ ಯೂನಿವರ್ಸಿಟಿಯಿಂದ ತಮ್ಮ 97ನೇ ವಯಸ್ಸಿನಲ್ಲಿ ಅವರು ಎಕನಾಮಿಕ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.
1920ರ ಎಪ್ರಿಲ್ನಲ್ಲಿ ಜನಿಸಿದ ಇವರು 1938ರಲ್ಲಿ ಆಗ್ರಾ ವಿಶ್ವವಿದ್ಯಾಲಯದಿಂದ ಪದವಿ ಪಡೆದುಕೊಂಡಿದ್ದರು. ಇವರ ಮೂರು ಗಂಡು ಮಕ್ಕಳು ಕೇಂದ್ರ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದಾರೆ.
ತನ್ನ ಸೊಸೆ ಹಾಗೂ ಪುಣೆ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮಾಜಿ ಮುಖ್ಯಸ್ಥೆ ಪ್ರೋ.ಭಾರತಿ.ಎಸ್.ಕುಮಾರ್ ಬೆಂಬಲದಿಂದ ಪರೀಕ್ಷೆ ಬರೆದು ಉತ್ತೀರ್ಣಗೊಂಡಿರುವುದಾಗಿ ವೈಶ್ಯ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.
ಯಾವುದೇ ವಿಶೇಷ ಸವಲತ್ತನ್ನು ಪಡೆಯದೆ ಸಾಮಾನ್ಯ ವಿದ್ಯಾರ್ಥಿಯಂತೆ ಬಂದು ಅವರು ಪರೀಕ್ಷೆ ಬರೆದಿದ್ದಾರೆ. ಅವರ ಮನೆಗೆಯೇ ತೆರಳಿ ಅವರಿಗೆ ಅಂಕಪಟ್ಟಿ ಪ್ರದಾನ ಮಾಡಲಿದ್ದೇವೆ ಎಂದು ನಳಂದ ವಿಶ್ವವಿದ್ಯಾಲಯದ ಕುಲಪತಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.