ಗದಗ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಬೆಳಗ್ಗೆ ಗದಗಕ್ಕೆ ಆಗಮಿಸಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.
ಇದೇ ವೇಳೆ ಗದುಗಿನ ನರಗುಂದಾ ಜಿಲ್ಲೆಯನ್ನು ಬಯಲು ಶೌಚ ಮುಕ್ತವೆಂದು ಅವರು ಘೋಷಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕೆಣ್ಣೂರಿನಲ್ಲಿ ನಡೆದ ಸ್ವಚ್ಛತಾ ಆಂದೋಲನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಇತಿಹಾಸದಲ್ಲಿ ಈ ಪುಟ್ಟ ಗ್ರಾಮ ಚಿರಸ್ಥಾಯಿಯಾಗಲಿದೆ ಎಂದರು. ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ರಾಮ ರಾಜ್ಯದ ಕಲ್ಪನೆ ಸಕಾರಾವಾಗುತ್ತದೆ. ಯುವ ಜನತೆ ತಮ್ಮ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು.
ತ್ಯಾಜ್ಯ ಸಂಸ್ಕರಣಾ ಘಟಕ, ಶುದ್ಧ ಕುಡಿಯುವ ನೀರಿನ ಘಟಕ ಇತ್ಯಾದಿ ಅಭಿವೃದ್ಧಿ ಕಾರ್ಯಗಳನ್ನು ಅವರು ಲೋಕಾರ್ಪಣೆಗೊಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.