ನವದೆಹಲಿ: ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಬ್ಬರು ಮಹಾಪುರುಷರಿಗೆ ಗೌರವಾರ್ಪಣೆ ನೆರವೇರಿಸಿದರು.
ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ವಿಜಯ್ ಘಾಟ್ಗೆ ತೆರಳಿ ಲಾಲ್ ಬಹುದ್ದೂರ್ ಶಾಸ್ತ್ರೀ ಅವರಿಗೆ ಪುಷ್ಪನಮನ ಸಲ್ಲಿಸಿದರು.
ಟ್ವಿಟ್ ಮಾಡಿರುವ ಮೋದಿ, ‘ಗಾಂಧೀ ಜಯಂತಿಯ ಅಂಗವಾಗಿ ರಾಷ್ಟ್ರಪಿತನಿಗೆ ತಲೆಬಾಗಿ ನಮಿಸುತ್ತೇನೆ. ಅವರ ಚಿಂತನೆಗಳು ಕೋಟ್ಯಾಂತರ ಜನರಿಗೆ ಸ್ಪೂರ್ತಿಯಾಗುತ್ತಿದೆ’ ಎಂದಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಎರಡನೇ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರೀ ಅವರಿಗೆ ಗೌರವ ನಮನ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.