ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಈ ಸಂಬಂಧ ಅಮಿಕಸ್ ಕ್ಯೂರಿಯನ್ನು ನೇಮಿಸಿದೆ.
ಅಮಿಕಸ್ ಕ್ಯೂರಿ ಎಂದರೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ನೇಮಿಸಲ್ಪಡುವ ವಕೀಲರಾಗಿದ್ದಾರೆ. ಈ ಪ್ರಕರಣದಲ್ಲಿ ಹಿರಿಯ ವಕೀಲ ಅಮರೇಂದರ್ ಶರಣ್ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಿದೆ.
ಮುಂಬಯಿ ಮೂಲದ ಸಂಶೋಧಕ ಡಾ.ಪಂಕಜ್ ಫಡ್ವಿಸ್ ಅವರು ಗಾಂಧೀಜಿಯ ಹತ್ಯೆಯ ಬಗ್ಗೆ ಹಲವಾರು ಸಂಶಯಗಳನ್ನು ವ್ಯಕ್ತಪಡಿಸಿ ಮರು ತನಿಖೆ ನಡೆಸಬೇಕು ಎಂದು ಅರ್ಜಿ ಸಲ್ಲಿಕೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.