ನಾಥು ಲಾ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸಿಕ್ಕಿಂನ ಬಾರ್ಡರ್ ಪೋಸ್ಟ್ ನಾಥು ಲಾಗೆ ಭೇಟಿ ನೀಡಿದ್ದಾರೆ. ಈ ವೇಳೆ ಚೀನಾ ಸೈನಿಕರೊಂದಿಗೆ ಅವರು ಸಂಭಾಷಣೆ ನಡೆಸಿದ್ದಾರೆ.
ಚೀನಾ ಸೈನಿಕರಿಗೆ ನಿರ್ಮಲಾ ಸೀತಾರಾಮನ್ ಅವರು ‘ನಮಸ್ತೆ’ ಮಾಡಲು ಕಲಿಸಿಕೊಟ್ಟ ವಿಡಿಯೋ ಇದೀಗ ವೈರಲ್ ಆಗಿದೆ.
ರಕ್ಷಣಾ ಸಚಿವಾಲಯ ನಿರ್ಮಲಾ ಅವರ ನಾಥು ಲಾ ಭೇಟಿಯ ವಿಡಿಯೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದೆ. ಇದರಲ್ಲಿ ಅವರು ಚೀನಿ ಸೈನಿಕರೊಂದಿಗೆ ಮಾತನಾಡುತ್ತಾ ಅವರಿಗೆ ನಮಸ್ತೆ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಆ ಸೈನಿಕರೂ ಪ್ರತಿಯಾಗಿ ನಮಸ್ತೆ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.