ಮುಂಬಯಿ: ಮಹಾರಾಷ್ಟ್ರದಲ್ಲಿ ನಡೆದ ಎರಡನೇ ಹಂತದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಸಾಧನೆ ಮಾಡಿದೆ. 3692 ಗ್ರಾಮ ಪಂಚಾಯತ್ಗಳ ಪೈಕಿ 1311ರಲ್ಲಿ ದಿಗ್ವಿಜಯ ಸಾಧಿಸಿದೆ. ಈ ಫಲಿತಾಂಶ ಕಾಂಗ್ರೆಸ್, ಎನ್ಸಿಪಿ, ಶಿವಸೇನಾಗೆ ಭಾರೀ ಮುಖಭಂಗವನ್ನುಂಟು ಮಾಡಿದೆ.
ಎರಡನೇ ಸ್ಥಾನದಲ್ಲಿರುವ ಕಾಂಗ್ರೆಸ್ ಗೆದ್ದುಕೊಂಡಿದ್ದು ಬರೀ 312 ಸೀಟುಗಳನ್ನು ಮಾತ್ರ, ಮೂರನೇ ಸ್ಥಾನದಲ್ಲಿರುವ ಎನ್ಸಿಪಿ 297 ಸ್ಥಾನಗಳನ್ನು ಗೆದ್ದುಕೊಂಡಿದೆ. ಶಿವಸೇನಾ 295 ಸ್ಥಾನ ಮತ್ತು ಇತರೆ 452 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
16 ಜಿಲ್ಲೆಗಳಲ್ಲಿನ ಒಟ್ಟು 3692 ಗ್ರಾಮ ಪಂಚಾಯತ್ಗಳು ಎರಡನೇ ಹಂತದಲ್ಲಿ ಚುನಾವಣೆಯನ್ನು ಎದುರಿಸಿದ್ದವು.
ಈ ಬಗ್ಗೆ ಟ್ವಿಟರ್ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ, ಬಿಜೆಪಿಯಲ್ಲಿ ಜನರು ಭರವಸೆ ಇಡುವುದನ್ನು ಮುಂದುವರೆಸಿದ್ದಾರೆ. ಇದು ನಮಗೆ ಇನ್ನಷ್ಟು ಕಾರ್ಯ ಮಾಡಲು ಪ್ರೇರಣೆ ನೀಡುತ್ತದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.