ಬೆಂಗಳೂರು: ರಾಜ್ಯದ ಮೂಲೆ ಮೂಲೆಯಲ್ಲೂ ಇಂದು ಕ್ನನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಧ್ವಜಾರೋಹಣವನ್ನು ಸಮಾರಂಭವನ್ನು ಏರ್ಪಡಿಸಲಾಗಿತ್ತು. ಇದೇ ವೇಳೆ ಸಿಎಂ ಕನ್ನಡ ಸೌರಭ ಎಂಬ ಕನ್ನಡ ಅಂತರ್ಜಾಲವನ್ನು ಲೋಕಾರ್ಪಣೆಗೊಳಿಸಿದರು.
ಎಲ್ಲಾ ಜಿಲ್ಲೆಗಳಲ್ಲೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿ ವಂದನೆಗಳನ್ನು ಸ್ವೀಕರಿಸಿದರು.
ಕರ್ನಾಟಕದ ಜನತೆ ಕನ್ನಡವನ್ನು ಗೌರವಿಸಬೇಕು, ಪ್ರೀತಿಸಬೇಕು. ಶಾಲೆಗಳಲ್ಲಿ ಕನ್ನಡ ಕಡ್ಡಾಯಗೊಳ್ಳಬೇಕು ಎಂಬ ಕೂಗು ಎಲ್ಲೆಡೆಯೂ ಕೇಳಿ ಬಂತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.