ವಿಯೆಟ್ನಾಂ: ಭಾರತವನ್ನು ಪ್ರಗತಿ ಪಥದತ್ತ ಕೊಂಡೊಯ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ವಿಯೆಟ್ನಾಂನಲ್ಲಿ ನಡೆದ ಏಷ್ಯಾ-ಪೆಸಿಫಿಕ್ ಎಕನಾಮಿಕ್ ಕಾರ್ಪೋರೇಶನ್ ಸಮಿತ್ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
‘ಭಾರತ ತನ್ನ ಆರ್ಥಿಕತೆಯನ್ನು ಮುಕ್ತಗೊಳಿಸಿದ ಬಳಿಕ ಅದು ಅಭೂತಪೂರ್ವ ಪ್ರಗತಿಯನ್ನು ಕಂಡಿದೆ. ತನ್ನ ಮಧ್ಯಮ ವರ್ಗವನ್ನು ವಿಸ್ತರಿಸುವ ಹೊಸ ಅವಕಾಶವನ್ನು ಅದು ತೆರೆದಿದೆ’ ಎಂದಿದ್ದಾರೆ.
ಪ್ರಧಾನಿ ಮೋದಿ ಭಾರತದಂತಹ ವಿಸ್ತಾರ ದೇಶವನ್ನು ಮತ್ತು ಅದರ ಜನರನ್ನು ಒಂದು ಗೂಡಿಸಲು ಶ್ರಮಿಸುತ್ತಿದ್ದಾರೆ. ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.
ಟ್ರಂಪ್ ಏಷ್ಯಾದಲ್ಲಿ ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.