ನವದೆಹಲಿ: ಬಲೂಚಿಸ್ತಾನ ಹೋರಾಟಗಾರರನ್ನು ಹತ್ತಿಕ್ಕಲು ಪಾಕಿಸ್ಥಾನ ಎಷ್ಟೇ ಪ್ರಯತ್ನಿಸುತ್ತಿದ್ದರೂ ಹೋರಾಟ ತೀವ್ರತೆಯನ್ನು ಪಡೆಯುತ್ತಲೇ ಸಾಗುತ್ತಿದೆ. ವರ್ಲ್ಡ್ ಬಲೋಚ್ ಆರ್ಗನೈಝೇಶನ್ ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಬಲಿಷ್ಠ ಜಾಹೀರಾತು ಅಭಿಯಾನ ಆರಂಭಿಸಿದೆ.
ಲಂಡನ್ನ 100 ಸಾರಿಗೆ ಬಸ್ಗಳಲ್ಲಿ ’ಫ್ರೀ ಬಲೂಚಿಸ್ತಾನ’ ಪೋಸ್ಟರ್ಗಳನ್ನು ಹಾಕಲಾಗಿದೆ. ಈ ಮೂಲಕ ಪಾಕಿಸ್ಥಾನಕ್ಕೆ ಹೋರಾಟಗಾರರು ದೊಡ್ಡ ಹೊಡೆತವನ್ನೇ ನೀಡಿದ್ದಾರೆ.
ಬಲೂಚಿಸ್ತಾನದಲ್ಲಿ ಪಾಕಿಸ್ಥಾನ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಹೋರಾಟಗಳನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಈ ಹಿಂದೆಯೂ ಲಂಡನ್, ವಿಶ್ವಸಂಸ್ಥೆಗಳಲ್ಲಿ ಬಲೂಚನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಪ್ರತಿಭಟನೆಗಳು ನಡೆದಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.