ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಮೊಬೈಲ್ ಅಪ್ಲಿಕೇಶನ್ UMANG ನ್ನು ಲೋಕಾರ್ಪಣೆಗೊಳಿಸಿದ್ದು, ಈ ಅಪ್ಲಿಕೇಶನ್ ಮೂಲಕ ಜನತೆ 150ಕ್ಕೂ ಅಧಿಕ ಕೇಂದ್ರ ಮತ್ತು ರಾಜ್ಯ ಸೇವೆಗಳ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗ್ಲೋಬಲ್ ಕಾನ್ಫರೆನ್ಸ್ ಆನ್ ಸೈಬರ್ ಸ್ಪೇಸ್ನ 5ನೇ ಆವೃತ್ತಿಯಲ್ಲಿ ಈ ಮೊಬೈಲ್ ಅಪ್ಲಿಕೇಶನನ್ನು ಬಿಡುಗಡೆಗೊಳಿಸಲಾಗಿದೆ.
ಉಮಂಗ್ ಎಂದರೆ Unified Mobile Application for New-Age Governance ಆಗಿದ್ದು, ಇದನ್ನು ಆಂಡ್ರಾಯ್ಡ್ ಮತ್ತು ಆಪಲ್ ಫೋನ್ಗಳಲ್ಲೂ ಡೌನ್ಲೋಟ್ ಮಾಡಿಕೊಳ್ಳಬಹುದಾಗಿದೆ.
ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ನ್ಯಾಷನಲ್ ಇ ಗವರ್ನೆನ್ಸ್ ಡಿವಿಜನ್ ಈ ಅಪ್ಲಿಕೇಶನನ್ನು ಅಭಿವೃದ್ಧಿಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.