×
Home About Us Advertise With s Contact Us

ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ವಿತ್ತೀಯ ಸೇರ್ಪಡೆಯು ಸಬಲೀಕರಣ ಹಾಗೂ ಆಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಬ್ಯಾಂಕಿಂಗ್ ವ್ಯವಹಾರಗಳ ಹಾಗೂ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವುದು ಅತೀ ಅಗತ್ಯ. ಇದು ಮಹಿಳೆಯರಲ್ಲಿ ಉಳಿತಾಯ ಹಾಗೂ ಹೂಡಿಕೆಯ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಸಹಕಾರಿ ಎಂದು ಉಜಿರೆಯ ಕರ್ನಾಟಕ ಬ್ಯಾಂಕ್‌ನ ಅಧಿಕಾರಿ ಹಾಗೂ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್‌ನ ಸದಸ್ಯೆ ಜ್ಯೋತಿ ಪ್ರತಾಪ್ ತಿಳಿಸಿದರು.

Banking-Awarenessಜ್ಯೋತಿ ಅವರು ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್‌ನಿಂದ ಇತ್ತೀಚೆಗೆ ಬೆಳ್ತಂಗಡಿ ರೋಟರಿ ಭವನದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ ಬ್ಯಾಂಕಿಂಗ್ ಸೌಲಭ್ಯಗಳ ಬಗೆಗಿನ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ಆನ್ಸ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಹೇಮಲತಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಕೌಸಲ್ಯ ಪ್ರಭು ಸ್ವಾಗತಿಸಿ, ಕಾರ್ಯದರ್ಶಿ ನವೀನಾ ಜಯಕುಮಾರ್ ವಂದಿಸಿದರು.

 

 

 

 

 

 

 

 

Recent News

Back To Top
error: Content is protected !!