Saturday, November 25th, 2017
News13
ಬಂಟ್ವಾಳ : ಬಂಟ್ವಾಳ ತಾಲೂಕು ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳು ಹಾಗೂ ಸಮಸ್ತ ಸಹಕಾರಿ ಬಂಧುಗಳ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದರ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹಾಗೂ ರಾಷ್ಟ್ರೀಯ ಡೈರಿ ಎಕ್ಸಲೆನ್ಸಿ ಪ್ರಶಸ್ತಿ ಪುರಸ್ಕೃತ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ಕೆ. ರವಿರಾಜ್ ಹೆಗ್ಡೆಯವರಿಗೆ ಅಭಿವಂದನಾ ಕಾರ್ಯಕ್ರಮವನ್ನು ಬಿ.ಸಿ. ರೋಡಿನ ರಂಗೋಲಿ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹಾಗೂ ಕೆ. ರವಿರಾಜ್ ಹೆಗ್ಡೆಯವರನ್ನು ಸನ್ಮಾನಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪದ್ಮನಾಭ ಕೊಟ್ಟಾರಿ, ಹರೀಶ್ ಸೇರಿದಂತೆ ಹಲವು ಗಣ್ಯರು, ಸಹಕಾರಿಗಳು ಭಾಗವಹಿಸಿದ್ದರು.