ನವದೆಹಲಿ: ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಉತ್ತೇಜಿಸುವ ಸಲುವಾಗಿ ರಾಜಸ್ಥಾನದ ಎಲ್ಲಾ ಹಾಸ್ಟೆಲ್ಗಳಲ್ಲೂ ಇನ್ನು ಮುಂದೆ ರಾಷ್ಟ್ರಗೀತೆಯನ್ನು ಹಾಡುವುದು ಕಡ್ಡಾಯವಾಗಿದೆ.
ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ವಿದ್ಯಾರ್ಥಿಗಳ ಸೇರಿದಂತೆ ಸುಮಾರು 789 ಹಾಸ್ಟೇಲ್ಗಳಿಗೆ ಈ ಆದೇಶವನ್ನು ನೀಡಲಾಗಿದೆ.
ಬೆಳಿಗ್ಗೆ 7 ಗಂಟೆಗೆ ಪ್ರತಿನಿತ್ಯ ರಾಷ್ಟ್ರಗೀತೆಯನ್ನು ಹಾಡಬೇಕು ಎಂದು ತಿಳಿಸಲಾಗಿದೆ.
ಈಗಾಗಲೇ ಎಲ್ಲಾ ರೆಸಿಡೆನ್ಶಿಯಲ್ ಸ್ಕೂಲ್ಗಳಲ್ಲೂ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಲಾಗುತ್ತಿದೆ. ಈ ನಿಯಮ ಹಾಸ್ಟೇಲ್ಗಳಿಗೂ ವಿಸ್ತರಣೆಯಾಗಿದೆ ಎಂದು ರಾಜಸ್ಥಾನ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.