ಕೋಲ್ಕತ್ತಾ: ‘ಗೋ ಗ್ರೀನ್’ ಅಭಿಯಾನದ ಭಾಗವಾಗಿ ವಿಮಾನ ನಿಲ್ದಾಣಗಳಲ್ಲಿ 200ಮೆಗಾವ್ಯಾಟ್ ಸೋಲಾರ್ ಪವರ್ಗಳನ್ನು ಉತ್ಪಾದನೆ ಮಾಡಲು ನಾಗರಿಕ ವಿಮಾನಯಾನ ಸಚಿವರು ಚಿಂತನೆ ನಡೆಸಿದ್ದಾರೆ.
ಭಾರತದಾದ್ಯಂತ ಏರ್ಪೋರ್ಟ್ಗಳಲ್ಲಿ ಮುಂದಿನ 5ರಿಂದ 6 ವರ್ಷದೊಳಗೆ 200 ಮೆಗಾವ್ಯಾಟ್ ಸೋಲಾರ್ ಪವರ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವ ಅಶೋಕ್ ಗಜಪತಿ ರಾಜು ಹೇಳಿದ್ದಾರೆ.
ಕೋಲ್ಕತ್ತಾದ ನೇತಾಜೀ ಸುಭಾಷ್ ಚಂದ್ರ ಬೋಸ್ ಏರ್ಪೋರ್ಟ್ನಲ್ಲಿ 15-ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ ಚಾಲನೆ ನೀಡಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
ಏರ್ಪೋರ್ಟ್ಗಳಲ್ಲಿ ಸೋಲಾರ್ ಉತ್ಪಾದನೆಯನ್ನು ಮಾಡಲು ರಾಜ್ಯ ಸರ್ಕಾರಗಳನ್ನು ಒಪ್ಪಿಸುವುದೇ ದೊಡ್ಡ ಕಷ್ಟವಾಗಿದೆ. ಈ ಕಾರ್ಯದಲ್ಲಿ ಯಶಸ್ವಿಯಾಗುವ ನಿರೀಕ್ಷೆ ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.