ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಕ್ಷೇತ್ರದ ಮೊದಲ ಹಂತದ ಚುನಾವಣೆ ಡಿಸೆಂಬರ್.9ರಂದು ನಡೆಯಲಿದ್ದು, ಪ್ರಚಾರ ಕಾರ್ಯಗಳಿಗೆ ಇಂದು ಸಂಜೆ ತೆರೆ ಬೀಳಲಿದೆ.
182 ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ವಿಜಯ್ ರೂಪಾಣಿ ಸೇರಿದಂತೆ ಒಟ್ಟು 977 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸೌರಾಷ್ಟ್ರ, ದಕ್ಷಿಣ ಗುಜರಾತ್ ಪ್ರದೇಶಗಳಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಚುನಾವಣೆ ಡಿಸೆಂಬರ್ 14ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ತವರು ಮತ್ತು ಬಿಜೆಪಿಯ ಭದ್ರಕೋಟೆಯಾಗಿರುವುದರಿಂದ ಈ ರಾಜ್ಯದ ಬಗ್ಗೆ ಸಹಜವಾಗಿಯೇ ದೇಶದಲ್ಲಿ ಕುತೂಹಲ ಮೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.