ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 2018ರ ಮಾರ್ಚ್ 1ರಿಂದ ಮಾ.17ರವರೆಗೆ ಪರೀಕ್ಷೆಗಳು ನಡೆಯಲಿವೆ.
ಪದವಿಪೂರ್ವ ಪಠ್ಯಕ್ರಮದಲ್ಲಿ ಒಟ್ಟು 23 ವಿಷಯಗಳು, 11 ಭಾಷೆಗಳು ಮತ್ತು 50 ಸಂಯೋಜನೆಗಳಿವೆ.
ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಪರೀಕ್ಷೆಗಳು ಮುಕ್ತಾಯವಾಗಲಿದೆ.
ಮಾರ್ಚ್ 1ರಂದು ಅರ್ಥಶಾಸ್ತ್ರ, ಭೌತಶಾಸ್ತ್ರ,
ಮಾರ್ಚ್ 2ರಂದು ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ನೆಸ್,
ಮಾರ್ಚ್ 3ರಂದು ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಮಾರ್ಚ್ 5ಕ್ಕೆ ವ್ಯವಹಾರ ಅಧ್ಯಯನ, ಜೀವಶಾಸ್ತ್ರ,
ಮಾ.6ರಂದು ಉರ್ದು, ಸಂಸ್ಕೃತ,
ಮಾ.7ರಂದು ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ,
ಮಾ.8ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ,
ಮಾ.9ರಂದು ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ,
ಮಾ.10ರಂದು ಇತಿಹಾಸ, ಸಂಖ್ಯಾಶಾಸ್ತ್ರ,
ಮಾ.12ರಂದು ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್,
ಮಾ.13ರಂದು ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಪರೀಕ್ಷೆ ನಡೆಯಲಿದೆ.
ಮಾ.14ರಂದು ಕನ್ನಡ, ಮಾ.15ರಂದು ಹಿಂದಿ, ಮಾ.16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್ ಮತ್ತು ಫ್ರೆಂಚ್, ಮಾ.17ರಂದು ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.