ನವದೆಹಲಿ: 1971ರ ಭಾರತ-ಪಾಕಿಸ್ಥಾನ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ಗೌರವ ನಮನ ಸಲ್ಲಿಸಿದರು.
ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾ ಮುಖ್ಯಸ್ಥ ಅಡ್ಮಿಲ್ ಸುನೀಲ್ ಲಾಂಬ, ವಾಯುಸೇನಾ ಮುಖ್ಯಸ್ಥ ಮಾರ್ಷಲ್ ಬಿರೇಂದರ್ ಸಿಂಗ್ ಅವರೂ ಹುತಾತ್ಮರಿಗೆ ಗೌರವಾರ್ಪಣೆ ಮಾಡಿದರು.
ಬಾಂಗ್ಲಾ ವಿಮೋಚನೆಗೆ ಕಾರಣವಾದ1971ರ ಯುದ್ಧದಲ್ಲಿ ಭಾರತ ಪಾಕಿಸ್ಥಾನದ ವಿರುದ್ಧ ದಿಗ್ವಿಜಯ ಸಾಧಿಸಿತ್ತು. ಈ ದಿನವನ್ನು ಬಾಂಗ್ಲಾದೇಶದಲ್ಲಿ ವಿಜಯ್ ಉತ್ಸವ್ ಆಗಿ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.