ಭೋಪಾಲ್: ವಿದ್ಯಾರ್ಥಿನಿಯರನ್ನು ಕೊಂಡೊಯ್ಯುವ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಮಹಿಳಾ ಕಂಡಕ್ಟರ್ಗಳೇ ಇರಬೇಕು ಎಂಬ ಆದೇಶವನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೊರಡಿಸಿದ್ದಾರೆ.
ವಿದ್ಯಾರ್ಥಿನಿಯರ ಮೇಲೆ ಶಾಲಾ ವಾಹನದ ಡ್ರೈವರ್ಗಳಿಂದಲೇ ದೌರ್ಜನ್ಯ ಎಸಗಿದಂತಹ ಅಪರಾಧಗಳು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.
ಎಲ್ಲಾ ಶಾಲೆಗಳಿಗೂ ಅವರು ಈ ಬಗ್ಗೆ ಕಟ್ಟಪ್ಪಣೆ ಹೊರಡಿಸಿದ್ದು, ವಿದ್ಯಾರ್ಥಿನಿಯರಿರುವ ಬಸ್ಗಳಲ್ಲಿ ಮಹಿಳಾ ಕಂಡಕ್ಟರ್ಗಳೇ ಇರಬೇಕು ಎಂದಿದ್ದಾರೆ.
ಈಗಾಗಲೇ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅತ್ಯಾಚಾರ ಮಾಡುವವರಿಗೆ ಮಧ್ಯಪ್ರದೇಶದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.