ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧಿಕೃತ ನಿವಾಸ ಕಾಳಿದಾಸ್ ಮಾರ್ಗ್ ೫ನ ಸಮಿಪ ನಿಂತು ಸೆಲ್ಫಿ ಕ್ಲಿಕ್ಕಿಸಿದರೆ ಇನ್ನು ಮುಂದೆ ಸಮಸ್ಯೆಗೆ ಸಿಲುಕಿಕೊಳ್ಳುವುದು ಕಟ್ಟಿಟ್ಟ ಬುತ್ತಿ.
ಈ ಪ್ರದೇಶ ಹೈ ಸೆಕ್ಯೂರಿಟಿ ಝೋನ್ ಎಂದು ಘೋಷಿಸಿ ಯುಪಿ ಪೊಲೀಸರು ಬ್ಯಾನರ್ ಅಳವಡಿಸಿದ್ದು, ಇಲ್ಲಿ ಸೆಲ್ಫಿ, ಫೋಟೋಗಳನ್ನು ಕ್ಲಿಕ್ಕಿಸುವುದು ದಂಡಾರ್ಹ ಅಪರಾಧ ಎಂದು ತಿಳಿಸಿದ್ದಾರೆ.
ಸಿಎಂ ನಿವಾಸದ ಭದ್ರತೆಗೆ ತೊಡಕಾಗಬಹುದು ಎಂಬ ಕಾರಣಕ್ಕೆ ಈ ಪ್ರದೇಶದಲ್ಲಿ ಜನರ ಸೆಲ್ಫಿ ಹವ್ಯಾಸಕ್ಕೆ ಬ್ರೇಕ್ ಹಾಕಲಾಗಿದೆ. ಇದಕ್ಕೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.