ನವದೆಹಲಿ: ಅಜಾತ ಶತ್ರು ಎಂದೇ ಕರೆಯಲ್ಪಡುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ದೇಶ ಭಕ್ತ, ಶಿಕ್ಷಣ ತಜ್ಞ ಮದನ್ ಮೋಹನ್ ಮಾಳವಿಯಾ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ.
ಅಟಲ್ ಜೀ ಅವರು 1924ರ ಡಿಸೆಂಬರ್ 25ರಂದು ಗ್ವಾಲಿಯರ್ನಲ್ಲಿ ಜನಿಸಿದರು. 1996ರಲ್ಲಿ ದೇಶದ 10ನೇ ಪ್ರಧಾನಿಯಾಗಿ ನೇಮಕಗೊಂಡ ಇವರು ಮೊದಲ ಅವಧಿಯಲ್ಲಿ 13 ದಿನಗಳ ಕಾಲ ಅಧಿಕಾರ ನಡೆಸಿದರು. ಬಳಿಕ 1998ರಿಂದ 2004ರವರೆಗೆ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದರು.
ಮದನ್ ಮೋಹನ್ ಮಾಳವಿಯಾ ಅವರು ಇತಿಹಾಸ ತಜ್ಞ, ಶಿಕ್ಷಣ ತಜ್ಞ ಹಾಗೂ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾಗಿದ್ದವರು. 1861ರ ಡಿಸೆಂಬರ್ 25ರಂದು ಅಲಹಾಬಾದ್ನಲ್ಲಿ ಜನಿಸಿದರು.
ಇಬ್ಬರು ಗಣ್ಯರಿಗೂ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಿ ಗೌರವಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.