ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ’ದೇಶಪ್ರೇಮ’ ದಿನವನ್ನಾಗಿ ಆಚರಣೆ ಮಾಡುವಂತೆ ರಾಜ್ಯಸಭೆಯಲ್ಲಿ ಸಂಸದರೊಬ್ಬರು ಮನವಿ ಮಾಡಿಕೊಂಡಿದ್ದಾರೆ.
ಪಶ್ಚಿಮಬಂಗಾಳದ ಸಂಸದ ರಿತಬ್ರತ್ ಬ್ಯಾನರ್ಜಿಯವರು ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸೇನಾನಿ ಸುಭಾಷ್ ಅವರಿಗೆ ಗೌರವಾರ್ಪಣೆ ಮಾಡುವ ಸಲುವಾಗಿ ಅವರ ಜನ್ಮದಿನವನ್ನು ‘ದೇಶಪ್ರೇಮ’ ದಿನವನ್ನಾಗಿ ಆಚರಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರ ಈ ವಿಷಯದ ಬಗ್ಗೆ ಪರಿಶೀಲನೆ ನಡೆಸುತ್ತದೆ ಎಂದು ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಜ.23ರಂದು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.