ನವದೆಹಲಿ: ಎನ್ಡಿಎ ಸರ್ಕಾರದ ಕೊನೆಯ ಬಜೆಟ್ನಲ್ಲಿ ಮಹಾತ್ಮ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್ಮೆಂಟ್ ಗ್ಯಾರಂಟಿ ಸ್ಕೀಮ್ (MGNREGS )ಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಈ ಯೋಜನೆಗೆ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ.
ಮೂಲಗಳ ಪ್ರಕಾರ 2018-19ರ ಬಜೆಟ್ನಲ್ಲಿ ಕಳೆದ ಬಜೆಟ್ಗಿಂತ ಶೇ.20ರಷ್ಟು ಅಧಿಕ ಹಣವನ್ನು ಗ್ರಾಮೀಣ ಉದ್ಯೋಗ ಯೋಜನೆಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಯೋಜನೆ ಗ್ರಾಮೀಣ ಭಾಗದ 11 ಕೋಟಿ ಜನರಿಗೆ ಸಹಾಯಕವಾಗುತ್ತಿದೆ, 2017-18ರಲ್ಲಿ ಎನ್ಡಿಎ ಇದಕ್ಕೆ ರೂ.48 ಸಾವಿರ ಕೋಟಿ ನೀಡುವ ನಿರೀಕ್ಷೆ ಇದೆ.
ಗ್ರಾಮೀಣ ಭಾಗದ ಜನರನ್ನು ಸಬಲೀಕರಣ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಪಾತ್ರವನ್ನು ವಹಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.