ಉಜೈನಿ: ಭಾರತವನ್ನು ಒಟ್ಟುಗೂಡಿಸುವ, ತಾರತಮ್ಯಗಳಿಂದ ಮುಕ್ತಗೊಳಿಸುವ ಅಗತ್ಯವಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.
ಉಜೈನಿಯಲ್ಲಿ ಭಾರತ ಮಾತೆಯ 16 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದ ಅವರು, ಭಾರತದ ಪ್ರಜೆಗಳು ಪರಸ್ಪರ ಒಬ್ಬರನ್ನೊಬ್ಬರು ಒಪ್ಪಿಕೊಳ್ಳಬೇಕು ಎಂದಿದ್ದಾರೆ.
‘ತಾಯ್ನಾಡಿಗೆ ನಾವು ಸೇವೆಯನ್ನು ಮುಡಿಪಾಗಿಡಬೇಕು. ನಮ್ಮನ್ನು ನಾವು ನನ್ನದು-ನಿನ್ನದು, ಮೇಲು-ಕೀಳು ಮುಂತಾದ ಎಲ್ಲಾ ವಿಧದ ತಾರತಮ್ಯಗಳಿಂದ ಮುಕ್ತಗೊಳಿಸಬೇಕು, ಎಲ್ಲರನ್ನೂ ಸಮಾನವಾಗಿ ಕಾಣಬೇಕು’ ಎಂದರು.
ಭಾರತ ಮಾತೆಯ ಅಖಂಡ ಅವತಾರಕ್ಕಾಗಿ ನಾವೆಲ್ಲ ಕಾರ್ಯನಿರ್ವಹಿಸಬೇಕು ಎಂದು ಅವರು ಅವರು ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.