ನವದೆಹಲಿ: ದೇಶದ ಗ್ರಾಮೀಣ ಭಾಗ ಸೇರಿದಂತೆ ಒಟ್ಟು 8,500 ರೈಲು ನಿಲ್ದಾಣಗಳು ಶೀಘ್ರದಲ್ಲೇ ವೈಫೈ ಸೌಲಭ್ಯವನ್ನು ಪಡೆದುಕೊಳ್ಳಲಿದೆ.
ಭಾರತದ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾ ಅಭಿಯಾನದಡಿ ಬರೋಬ್ಬರಿ 700 ಕೋಟಿ ರೂಪಾಯಿಗಳ ವೆಚ್ಚದಲ್ಲಿ ವೈಫೈ ಸೇವೆಗಳನ್ನು ರೈಲ್ವೇ ನಿಲ್ದಾಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಈಗಾಗಲೇ ದೇಶದ ಪ್ರಮುಖ 216 ರೈಲ್ವೇ ನಿಲ್ದಾಣಗಳಲ್ಲಿ ಫ್ರೀ ವೈಫೈ ಸೇವೆ ಇದೆ. ಇದರಿಂದ 7 ಮಿಲಿಯನ್ ಜನರು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
‘ದೈನಂದಿನ ಕೆಲಸ ಕಾರ್ಯಗಳಲ್ಲಿ ಇಂಟರ್ನೆಟ್ ಮಹತ್ವದ ಪಾತ್ರವನ್ನು ವಹಿಸುತ್ತಿದೆ. ಹೀಗಾಗಿ ದೇಶದ ರೈಲು ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ ಸೇವೆ ಅಳವಡಿಸಲು ನಿರ್ಧರಿಸಿದ್ದೇವೆ’ ಎಂದು ಹಿರಿಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.