ನವದೆಹಲಿ: ಎಲ್ಲೂ ಪ್ಲಾಸ್ಟಿಕ್ ಧ್ವಜಗಳ ಬಳಕೆಯಾಗದಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಗಣರಾಜ್ಯೋತ್ಸವದ ಅಂಗವಾಗಿ ಎಲ್ಲಾ ರಾಜ್ಯಗಳಿಗೂ, ಕೇಂದ್ರಾಡಳಿತ ಪ್ರದೇಶಗಳಿಗೂ ಕೇಂದ್ರ ಗೃಹಸಚಿವಾಲಯ ಆದೇಶ ನೀಡಿದೆ.
ರಾಷ್ಟ್ರಧ್ವಜ ಭಾರತೀಯರ ಭರವಸೆ ಮತ್ತು ಆಶಯವನ್ನು ಪ್ರತಿನಿಧಿಸುತ್ತದೆ, ಹೀಗಾಗಿ ಅದಕ್ಕೆ ಘನತೆಯ ಸ್ಥಾನ ನೀಡಬೇಕು ಎಂದು ಗೃಹ ಸಚಿವಾಲಯ ಬರೆದ ಪತ್ರದಲ್ಲಿ ತಿಳಿಸಿದೆ.
ಹಲವಾರು ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜ ಬಳಸುವುದು ಸಚಿವಾಲಯದ ಗಮನಕ್ಕೆ ಬಂದಿದೆ. ಇನ್ನು ಮುಂದೆ ಹಾಗಾಗಬಾರದು ಎಂದು ಎಚ್ಚರಿಕೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.