ನವದೆಹಲಿ: ಭಾರತದಲ್ಲಿ ನಡೆಯಲಿರುವ ಇಂಡಿಯಾ ಓಪನ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಒಟ್ಟು 25 ರಾಷ್ಟ್ರಗಳು ಭಾಗವಹಿಸಲಿವೆ ಎಂದು ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಅಜಯ್ ಸಿಂಗ್ ತಿಳಿಸಿದ್ದಾರೆ.
‘ಇಂಡಿಯಾ ಓಪನ್ ಇದೇ ಮೊದಲ ಬಾರಿಗೆ ಆಯೋಜನೆಗೊಳ್ಳುತ್ತಿದ್ದು, 25 ರಾಷ್ಟ್ರಗಳು ಭಾಗವಹಿಸುತ್ತಿವೆ. ಬಾಕ್ಸಿಂಗ್ ದಿಗ್ಗಜರು ಚಾಂಪಿಯನ್ಶಿಪ್ಗಾಗಿ ಹೋರಾಡಲಿದ್ದಾರೆ’ ಎಂದಿದ್ದಾರೆ.
ಜನವರಿ 28ರಿಂದ ನವದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಇಂಡಿಯಾ ಓಪನ್ ಜರುಗಲಿದೆ. ಗೆದ್ದವರಿಗೆ 100,000 ಡಾಲರ್ ಬಹುಮಾನವಿದೆ.
ಭಾರತ ಅಂತಾರಾಷ್ಟ್ರೀಯ ಅನುಭವ ಹೊಂದಿರುವ 4 ತಂಡಗಳನ್ನು ಕಣಕ್ಕಿಳಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.