ನವದೆಹಲಿ: ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ.
ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಸಲುವಾಗಿ ಒಮ್ಮತಕ್ಕೆ ಬರುವಂತೆ ಪ್ರಯತ್ನಿಸಲು ಬಿಜೆಪಿ ನಾಯಕರಿಗೆ ಅವರು ಕರೆ ನೀಡಿದ್ದಾರೆ.
ನೀತಿ ಆಯೋಗದ ಸಭೆಯಲ್ಲೂ ಅವರು, ಎಲ್ಲಾ ಪಕ್ಷಗಳ ಮೇಲೆ ಒತ್ತಡ ಹಾಕಿ ಏಕ ಕಾಲದಲ್ಲಿ ಚುನಾವಣೆ ನಡೆಯುವಂತೆ ಮಾಡಲು ಪ್ರಯತ್ನಿಸಿ ಎಂಬುದಾಗಿ ಪರಿಣಿತರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಮೋದಿಯ ಈ ಪ್ರಯತ್ನ ಸಫಲವಾದರೆ ಸ್ವಾತಂತ್ರ್ಯದ ಬಳಿಕ ನಡೆದ ಅತೀದೊಡ್ಡ ಸುಧಾರಣಾ ಕ್ರಮವಾಗಲಿದೆ. ಚುನಾವಣೆಗೆ ವೆಚ್ಚವಾಗುವ ಅತ್ಯಧಿಕ ಪ್ರಮಾಣದ ಹಣವೂ ಉಳಿತಾಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.