ನವದೆಹಲಿ: ತ್ರಿಪುರದಲ್ಲಿ ಫೆಬ್ರವರಿ 18ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ನಾಗಾಲ್ಯಾಂಡ್ ಹಾಗೂ ಮೇಘಾಲಯದಲ್ಲಿ ಫೆಬ್ರವರಿ.27ಕ್ಕೆ ಚುನಾವಣೆ ನಡೆಯಲಿದೆ. ಮಾರ್ಚ್.3ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಈ ಮೂರು ರಾಜ್ಯಗಳಲ್ಲಿ ಒಟ್ಟು60ವಿಧಾನಸಭಾ ಸ್ಥಾನಗಳಿವೆ. ತ್ರಿಪುರದಲ್ಲಿ ಮಾ.6ರಂದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ, ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಮಾ.13 ಮತ್ತು ಮಾ.14ರಂದು ಹೊಸ ಸರ್ಕಾರ ರಚನೆಯಾಗಲಿದೆ.
1993ರಿಂದ ತ್ರಿಪುರದಲ್ಲಿ ಎಡಪಂಥೀಯ ಸರ್ಕಾರ ಅಧಿಕಾರದಲ್ಲಿದೆ, ಮೇಘಾಲಯದಲ್ಲಿ 8 ವರ್ಷಗಳಿಂದ ಕಾಂಗ್ರೆಸ್ ಇದೆ. ನಾಗಾಲ್ಯಾಂಡ್ನಲ್ಲಿ ಬಿಜೆಪಿ ಬೆಂಬಲದೊಂದಿಗೆ ನಾಗಾ ಪೀಪಲ್ಸ್ ಫ್ರಂಟ್ ಆಡಳಿತ ನಡೆಸುತ್ತಿದೆ.
ಮುಂದಿನ ಚುನಾವಣೆಯಲ್ಲಿ ಇಲ್ಲಿನ ಜನತೆ ಯಾರ ಕೈಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.