ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಅಸ್ಥಿರತೆ, ಹಿಂಸಾಚಾರ ಸೃಷ್ಟಿಸಲು ದೇಣಿಗೆ ಸಂಗ್ರಹಿಸುತ್ತಿದ್ದ ಆರೋಪ ಹೊತ್ತಿರುವ 12 ಮಂದಿಯ ವಿರುದ್ಧ ಎನ್ಐಎ ಗುರುವಾರ ಚಾರ್ಜ್ಶೀಟ್ ದಾಖಲಿಸಿದೆ.
ಲಷ್ಕರ್-ಇ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್, ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮುಂತಾದವರ ವಿರುದ್ಧ ನ್ಯಾಯಾಲಯಕ್ಕೆ 1,270 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಅಲ್ಲದೇ ಇವರ ವಿರುದ್ಧ ತನಿಖೆ ಮುಂದುವರೆಸಲು ಅನುಮತಿ ಕೇಳಿದೆ. ಪ್ರಕರಣದಲ್ಲಿ ಬಂಧಿತರಾಗಿರುವ 10 ಮಂದಿಯ ನ್ಯಾಯಾಂಗ ಬಂಧನದ ಅವಧಿಯೂ ನಿನ್ನೆಗೆ ಮುಕ್ತಾಯಗೊಂಡಿದೆ.
ಉಗ್ರವಾದ ತಡೆ-ಕಾನೂನು ಬಾಹಿರ ಕೃತ್ಯ ತಡೆ ಮಸೂದೆಯ ಅನ್ವಯ ತನಿಖಾ ಸಂಸ್ಥೆ 6 ತಿಂಗಳೊಳಗೆ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಬೇಕು, ಇದಕ್ಕೆ ವಿಫಲವಾದರೆ ಆರೋಪಿಗಳು ಜಾಮೀನು ಪಡೆಯಲು ಅರ್ಹರಾಗುತ್ತಾರೆ.
ತನಿಖೆಯ ವೇಳೆ ಆರೋಪಿಗಳ ವಿರುದ್ಧ ಗಣನೀಯ ಮಾಹಿತಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾಗಿ ಎನ್ಐಎ ಹೇಳಿಕೊಂಡಿದೆ, 60 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ, 950 ದೋಷಾರೋಪಣಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ 300 ಸಾಕ್ಷಿಗಳು ಇದ್ದಾರೆ ಎಂದಿದೆ.
ಕಾಶ್ಮೀರ ಪ್ರತ್ಯೇಕತಾವಾದಿ ಹೋರಾಟಗಾರರು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಕೆಲವರ ಬಂಧನವೂ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.