ನವದೆಹಲಿ: ಭಾರತೀಯ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂದ ಜ.೨೫ನ್ನು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.
ರಾಷ್ಟ್ರೀಯ ಮತದಾರ ದಿನದ ಅಂಗವಾಗಿ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘’ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಎಲ್ಲರಿಗೂ ಶುಭಾಶಯ, ಈ ದಿನ ಸ್ಥಾಪನೆಗೊಂಡಿರುವ ಚುನಾವಣಾ ಆಯೋಗಕ್ಕೆ ಅಭಿನಂದನೆಗಳು’ ಎಂದಿದ್ದಾರೆ.
ಎಲ್ಲಾ ಅರ್ಹ ಮತದಾರರಿಗೆ ಅದರಲ್ಲೂ ಮುಖ್ಯವಾಗಿ ಯುವಜನತೆ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿ ಮತ್ತು ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿ. ಮತದ ಶಕ್ತಿ ಅಗಾಧವಾಗಿದೆ’ ಎಂದಿದ್ದಾರೆ.
2011ರಿಂದ ಚುನಾವಣಾ ಆಯೋಗದ ಸ್ಥಾಪನೆಯ ಸ್ಮರಣಾರ್ಥ ’ರಾಷ್ಟ್ರೀಯ ಮತದಾರರ ದಿನ’ವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.