ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಜನಪ್ರಿಯ ಸಾಮಾಜಿಕ ಜಾಲತಾನ ಟ್ವಿಟರ್ ಇಂಡಿಯಾ ಗೇಟ್ನ ಇಮೋಜಿಯನ್ನು ಬಿಡುಗಡೆಗೊಳಿಸಿದೆ. ಈ ಇಮೋಜಿ 9 ಭಾಷೆಗಳಲ್ಲಿ ಲಭ್ಯವಿದ್ದು, ಜ.29ರವರೆಗೆ ಬಳಸಿಕೊಳ್ಳಬಹುದು.
‘ಗಣರಾಜ್ಯೋತ್ಸವ ಇಮೋಜಿಯೊಂದಿಗೆ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಲು ಟ್ವಿಟರ್ ಇಂಡಿಯ ಸಂಸತ ಪಡುತ್ತದೆ. ಈ ಇಮೋಜಿ ಭಾರತದ ಏಕತೆಯ ಸಂಕೇತವಾಗಿದೆ’ ಎಂದು ಟ್ವಿಟರ್ ಇಂಡಿಯಾ ಮುಖ್ಯಸ್ಥೆ ಮಹಿಮಾ ಕೌಲ್ ಹೇಳಿದ್ದಾರೆ.
ಈಗಾಗಲೇ ಈ ಇಮೋಜಿಯನ್ನು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಸೇರಿದಂತೆ ಅನೇಕರು ಬಳಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.