ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. 1948ರ ಜನವರಿ 30ರಂದು ನವದೆಹಲಿಯಲ್ಲಿ ಗಾಂಧೀಜಿ ದುಷ್ಕರ್ಮಿಯ ಗುಂಡೇಟಿಗೆ ಬಲಿಯಾಗಿದ್ದರು. ಈ ದಿನವನ್ನು ಪ್ರತಿವರ್ಷ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.
‘ಪುಣ್ಯತಿಥಿಯ ಅಂಗವಾಗಿ ಬಾಪು ಅವರನ್ನು ಸ್ಮರಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದಾರೆ.
’ದೇಶಕ್ಕಾಗಿ ಸೇವೆ ಸಲ್ಲಿಸಿ ಮಡಿದ ಎಲ್ಲಾ ಹುತಾತ್ಮರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಅವರ ಸಾಹಸ ಮತ್ತು ದೇಶದ ಬಗೆಗೆ ಅವರಿಗಿದ್ದ ಸಮರ್ಪಣಾ ಮನೋಭಾವವನ್ನು ಸದಾ ಸ್ಮರಿಸುತ್ತೇವೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.