ನವದೆಹಲಿ: ಇತ್ತೀಚಿಗೆ 8 ತಿಂಗಳ ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣ ಮಾನವನ ಪೈಶಾಚಿಕತೆ ಹದ್ದು ಮೀರಿದೆ ಎಂಬುದನ್ನು ತೋರಿಸಿದೆ. ಈ ಘಟನೆಯ ಬಳಿಕ ಎಚ್ಚೆತ್ತುಕೊಂಡಿರುವ ದೆಹಲಿಯ ಮಹಿಳಾ ಆಯೋಗ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಬಡಿದೆಬ್ಬಿಸಲು ಸತ್ಯಾಗ್ರಹ, ಅಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಲು ಮುಂದಾಗಿದೆ.
ತಾನು ಮತ್ತು ತನ್ನ ತಂಡ ಮುಂದಿನ 30 ದಿನಗಳ ಕಾಲ ಮನೆಗಳಿಗೆ ತೆರಳದೆ ಹಗಲು ರಾತ್ರಿ ಕೆಲಸ ಮಾಡಿ ನಮ್ಮ ಪ್ರತಿಭಟನೆಯನ್ನು ತೋರಿಸುತ್ತೇವೆ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಲ್ ಹೇಳಿದ್ದಾರೆ.
ಹೆಚ್ಚುತ್ತಿರುವ ಅತ್ಯಾಚಾರ, ಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ಸರ್ಕಾರಗಳು ಕಠಿಣಾತಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಅವರು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.