ಕಠ್ಮಂಡು: ಈಗಾಗಲೇ ಯಶಸ್ವಿಯಾಗಿ ಸಂಸದೀಯ ಮತ್ತು ಪ್ರಾಂತೀಯ ಚುನಾವಣೆಗಳನ್ನು ನಡೆಸಿರುವ ನೇಪಾಳಕ್ಕೆ ರಾಜಕೀಯ ಸ್ಥಿರತೆ ಮತ್ತು ಅಭಿವೃದ್ಧಿ ಸಾಧಿಸಲು ಭಾರತ ಸಹಾಯ ಮಾಡಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ನೇಪಾಳದ ಸಿಪಿಎನ್-ಮಾವೋವಾದಿ ಸೆಂಟರ್ ಮುಖ್ಯಸ್ಥ ಪ್ರಚಂಡ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುಷ್ಮಾ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಸಿಪಿಎನ್-ಯುಎಂಎಲ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿವೆ.
ಸುಷ್ಮಾರೊಂದಿಗೆ ಧನಾತ್ಮಕ ಮತ್ತು ರಚನಾತ್ಮಕ ಸಭೆ ನಡೆಸಿದ್ದಾಗಿ ಪ್ರಚಂಡ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.