ನವದೆಹಲಿ: ಐಐಟಿ, ಎನ್ಐಟಿಯಂತಹ ಪ್ರಮುಖ ಸಂಸ್ಥೆಗಳ ಸುಮಾರು 1200 ಪದವೀಧರರು ಹಿಂದುಳಿದ ಪ್ರದೇಶಗಳ ಸರ್ಕಾರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿಂದುಳಿದ ಭಾಗಗಳಲ್ಲಿ ಇರುವ 53 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಲಿಸಲು ಐಐಟಿ, ಎನ್ಐಟಿಗಳ ಸುಮಾರು 1200 ಪದವೀಧರರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಹಿಂದುಳಿದ ಪ್ರದೇಶಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಈ ಕ್ರಮವನ್ನು ತೆಗೆದುಕೊಂಡಿದ್ದೇವೆ. ಇದರಿಂದ 1 ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.