ನವದೆಹಲಿ: ಭಾರತದ ದಿಗ್ಗಜ ಕ್ರಿಕೆಟ್ ಆಟಗಾರ್ತಿ ಜುಲನ್ ಗೋಸ್ವಾಮಿ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 200 ವಿಕೆಟ್ಗಳನ್ನು ಕಬಳಿಸಿದ ಭಾರತದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕಿಂಬರ್ಲೆಯ ಡೈಮಂಡ್ ಓವಲ್ನಲ್ಲಿ ನಡೆದ ಮೂರು ಪಂದ್ಯ ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮೊದಲ ವಿಕೆಟ್ ಕಬಳಿಸುವ ಮೂಲಕ 35 ವರ್ಷದ ಜುಲನ್ ಈ ಸಾಧನೆ ಮಾಡಿದರು.
ಭಾರತ ಈ ಪಂದ್ಯವನ್ನು 178 ರನ್ಗಳ ಮೂಲಕ ಜಯಿಸಿ, ಸರಣಿಯಲ್ಲಿ 2-0 ಮುನ್ನಡೆಯನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.