ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು ಎಂದು ವೈಟ್ಹೌಸ್ ಮೂಲಗಳು ತಿಳಿಸಿದೆ.
ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗುತ್ತಿರುವ ಪಾಕಿಸ್ಥಾನದ ವಿರುದ್ಧ ಅಮೆರಿಕಾ ತೀಕ್ಷ್ಣ ಪ್ರತಿಕ್ರಿಯೆಗಳನ್ನು ನೀಡುತ್ತಿರುವ ಈ ಸಂದರ್ಭ ಟ್ರಂಪ್ ಮೋದಿಗೆ ಕರೆ ಮಾಡಿದ್ದು ಮಹತ್ವ ಪಡೆದುಕೊಂಡಿದೆ. ಅಲ್ಲದೇ ಮಾಲ್ಡೀವ್ಸ್ ಬಿಕ್ಕಟ್ಟಿನ ಬಗ್ಗೆಯೂ ಉಭಯ ನಾಯಕರ ನಡುವೆ ವಿಷಯ ಪ್ರಸ್ತಾಪವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆಯ ಹೆಚ್ಚಳ, ಅಫ್ಘಾನ್ ಯುದ್ಧ, ಮಯನ್ಮಾರ್ ರೊಹಿಂಗ್ಯ ವಿಷಯ, ಉತ್ತರಕೊರಿಯಾದ ನ್ಯೂಕ್ಲಿಯರ್ ಕಾರ್ಯಕ್ರಮಗಳ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.