ಮಂಗಳೂರು: ಈ ಬಾರಿ ಕರ್ನಾಟಕದಲ್ಲಿ ಕಮಲ ಅರಳಿಸುವ ಪಣತೊಟ್ಟಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೋಮವಾರದಿಂದ ಕರಾವಳಿ ಪ್ರವಾಸ ಆರಂಭಿಸಲಿದ್ದಾರೆ.
ದಕ್ಷಿಣ ಕನ್ನಡದ ವಿವಿಧ ಭಾಗಗಳಿಗೆ ಭೇಟಿಕೊಡಲಿರುವ ಅವರು, ಪುಣ್ಯ ಕ್ಷೇತ್ರವಾದ ಸುಬ್ರಹ್ಮಣ್ಯಕ್ಕೆ ದೇವರ ದರ್ಶನ ಪಡೆಯಲಿದ್ದಾರೆ. ನಾಳೆ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಬಂಟ್ವಾಳದ ‘ನವಶಕ್ತಿ’ ಸಂಗಮದಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇತ್ತೀಚಿಗೆ ಮತಾಂಧರ ದಾಳಿಗೆ ಬಲಿಯಾದ ದೀಪಕ್ ರಾವ್ ಮನೆಗೆ ಅವರು ಭೇಟಿಕೊಡಲಿದ್ದಾರೆ. ಬಳಿಕ ಉಡುಪಿಗೆ ಅವರು ತೆರಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.