ನವದೆಹಲಿ: ದೇಶದಲ್ಲಿನ ಮಹಿಳಾ ಉದ್ಯಮಿಗಳಿಗೆ ಉತ್ತೇಜನವನ್ನು ನೀಡುವ ಸಲುವಾಗಿ ನೀತಿ ಆಯೋಗವು ಮಹಿಳಾ ಉದ್ಯಮಿಗಳ ಪ್ರತ್ಯೇಕ ಘಟಕವನ್ನು ರಚಿಸಲು ನಿರ್ಧರಿಸಿದೆ.
ನೀತಿ ಆಯೋಗದ ಸದಸ್ಯ ಅಣ್ಣ ರಾಯ್ ಅವರು ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ಮಹಿಳಾ ಉದ್ಯಮಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ತಿಳಿಸಿದ್ದಾರೆ.
ಮುಂದಿನ ತಿಂಗಳಲ್ಲೇ ಮಹಿಳಾ ಘಟಕ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಹಿಳಾ ಉದ್ಯಮಿಗಳಿಗೆ ಅವರ ವಿನೂತನ ಯೋಜನೆಗಳನ್ನು ಹಂಚಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಡುವ ಸಲುವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.