ದುಮ್ಕಾ: ತನ್ನ ರಾಜ್ಯದಲ್ಲಿ ಅರಾಜಕತೆಯನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಾರ್ಖಾಂಡ್ ಸರ್ಕಾರ ಪಿಎಫ್ಐಗೆ ನಿಷೇಧ ಹೇರಿದೆ. ಗೃಹ ಇಲಾಖೆಯ ಪ್ರಸ್ತಾವಣೆಗೆ ಕಾನೂನು ಇಲಾಖೆ ಅನುಮೋದನೆ ನೀಡಿದ ಬಳಿಕ ನಿಷೇಧದ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಅಪರಾಧ ಕಾನೂನು ತಿದ್ದುಪಡಿ ಕಾಯ್ದೆ, 1908ರ ಸೆಕ್ಷನ್ 16 ಅಡಿಯಲ್ಲಿ ಪಿಎಫ್ಐಗೆ ನಿಷೇಧವನ್ನು ವಿಧಿಸಲಾಗಿದೆ.
ಬಿಜೆಪಿ ಮುಖಂಡರು ಈ ಕ್ರಮವನ್ನು ಸ್ವಾಗತಿಸಿದ್ದು, ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಸಕರಾತ್ಮಕ ಬೆಳವಣಿಗೆ ಕಾಣಲಿದೆ ಎಂದಿದ್ದಾರೆ.
ಹಲವಾರು ಅಪರಾಧ ಪ್ರಕರಣಗಳಲ್ಲಿ ಪಾಲ್ಗೊಂಡ ಆರೋಪ ಪಿಎಫ್ಐ ಮೇಲಿದ್ದು, ಕೇರಳ, ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲೂ ಇದರ ನಿಷೇಧಕ್ಕೆ ಆಗ್ರಹ ಕೇಳಿ ಬರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.