ನವದೆಹಲಿ: ವಿಯೆಟ್ನಾಂ ಅಧ್ಯಕ್ಷ ಟ್ರಾನ್ ದಯ್ ಕ್ವಾಂಗ್ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಶನಿವಾರ ಅವರಿಗೆ ಔಪಚಾರಿಕ ಸ್ವಾಗತವನ್ನು ಕೋರಲಾಯಿತು.
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕ್ವಾಂಗ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಶುಕ್ರವಾರ ಸಂಜೆ ಅವರು ಭಾರತಕ್ಕೆ ಬಂದಿಳಿದಿದ್ದಾರೆ. ಬಳಿಕ ಬೋಧಗಯಾಗೆ ತೆರಳಿ ಅವರು ಪ್ರಾರ್ಥನೆ ಸಲ್ಲಿಸಿದರು.
18 ಮಂದಿ ಸಚಿವ, ಅಧಿಕಾರಗಳ ಜೊತೆ ಆಗಮಿಸಿರುವ ಅವರು ವಿವಿಧ ಉದ್ಯಮಿಗಳ ಜೊತೆ ಮಾತುಕತೆಯನ್ನು ನಡೆಸಲಿದ್ದಾರೆ.
2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಯೆಟ್ನಾಂಗೆ ತೆರಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.