ಶಿಲ್ಲಾಂಗ್ : ಮೇಘಾಲಯದ ನೂತನ ಮುಖ್ಯಮಂತ್ರಿಯಾಗಿ ಎನ್ಪಿಪಿ ಪಕ್ಷದ ಕಾನ್ರಾಡ್ ಸಾಂಗ್ಮಾ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ರಾಜಧಾನಿ ಶಿಲ್ಲಾಂಗ್ನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ಗಂಗಾ ಪ್ರಸಾದ್ ಅವರು ಸಂಗ್ಮಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇವರೊಂದಿಗೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ಮೊದಲ ಬಾರಿಗೆ 5 ಪಕ್ಷಗಳ ಮೈತ್ರಿಕೂಟ ರಚನೆಯಾಗಿದ್ದು, ಬಿಜೆಪಿ ಬೆಂಬಲಿತ ನ್ಯಾಷನಲ್ ಪೀಪಲ್ಸ್ ಪಕ್ಷದ ಮುಖ್ಯಸ್ಥ ಕಾನ್ರಾಡ್ ಸಾಂಗ್ಮಾ ಅವರು ಮುಖ್ಯಮಂತ್ರಿಯಾಗಿದ್ದಾರೆ.
40 ವರ್ಷದ ಕಾನ್ರಾಡ್ ಸಾಂಗ್ಮಾ ಅವರು ಮಾಜಿ ಕಾಂಗ್ರೆಸ್ ಮುಖಂಡ ದಿವಂಗತ ಪಿಎ ಸಾಂಗ್ಮಾ ಅವರ ಕಿರಿಯ ಪುತ್ರ. ಇವರು ಮೇಘಾಲಯದ ಅತ್ಯಂತ ಕಿರಿಯ ಹಣಕಾಸು ಸಚಿವ ಎಂದೂ ಹೆಸರು ಪಡೆದಿದ್ದಾರೆ.
ಮೇಘಾಲಯ ವಿಧಾನಸಭಾ ಕ್ಷೇತ್ರದ ಒಟ್ಟು 59 ಸ್ಥಾನಗಳ ಪೈಕಿ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಎಸ್ಸಿಪಿಗೆ 19, ಬಿಜೆಪಿಗೆ 2 ಹಾಗೂ ಇತರರು 17 ಸ್ಥಾನ ಪಡೆದಿದ್ದರು. ಸರ್ಕಾರ ರಚನಗೆ 31 ಸ್ಥಾನಗಳ ಅವಶ್ಯಕತೆಯಿದ್ದು, ಯಾವುದೇ ಪಕ್ಷಕ್ಕೂ ಪೂರ್ಣ ಬಹುಮತವಿರಲಿಲ್ಲ. ಹೀಗಾಗಿ ಸ್ಥಳೀಯ ಪಕ್ಷಗಳು ಹಾಗೂ ಇತರ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದ್ದು, ಇದೀಗ ಯಶಸ್ವಿ ಕೂಡ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.