ಗೋರಖ್ಪುರ: ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಿಗೆ ಮಾ.11ರಂದು ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ಭರ್ಜರಿಯಾಗಿ ಸಾಗುತ್ತಿದ್ದು, ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರತಿರೂಪಿಗಳು ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ.
ದೆಹಲಿಯಿಂದ ಆಗಮಿಸಿರುವ ಮೋದಿಯಂತೆಯೇ ಕಾಣುವ ರಣವೀರ್ ಅವರು ಗೋರಖ್ಪುರ ಕ್ಷೇತ್ರ ಮತ್ತು ಫುಲ್ಪುರ್ ಕ್ಷೇತ್ರಗಳ ಮೂಲೆ ಮೂಲೆಗೆ ತೆರಳಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡುತ್ತಿದ್ದಾರೆ. ಅಮಿತ್ ಶಾರಂತೆ ಕಾಣುವ ವ್ಯಕ್ತಿಯೂ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ.
ಗೋರಖ್ಪುರ ಯೋಗಿ ಆದಿತ್ಯನಾಥ ಅವರ ಲೋಕಸಭಾ ಕ್ಷೇತ್ರವಾಗಿದ್ದು, ಅವರ ರಾಜೀನಾಮೆ ಬಳಿಕ ತೆರವಾಗಿದೆ. ಫುಲ್ಪುರ ಕ್ಷೇತ್ರ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಲೋಕಸಭಾ ಕ್ಷೇತ್ರವಾಗಿದ್ದು, ಅವರು ಅಧಿಕಾರ ವಹಿಸಿಕೊಂಡ ಹಿನ್ನಲೆಯಲ್ಲಿ ತೆರವಾಗಿದೆ.
ಈ ಉಪಚುನಾವಣೆಗಳ ಫಲಿತಾಂಶ ಮಾ.14ರಂದು ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.