ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ, ಹೀಗಾಗಿ ಇಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರು ಆಗ್ರಹಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರಿಗೆ ವಿಶೇಷ ಆತಿಥ್ಯ ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರು ಕಿಡಿ ಕಾರಿದರು.
ಲೋಕಾಯುಕ್ತರ ಮೇಲಿನ ಚೂರಿ ಇರಿತ ಪ್ರಕರಣ ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದು, ರಾಜ್ಯದ ಘನತೆಯನ್ನು ಕುಗ್ಗಿಸಿದೆ. ಗೌರವಾನ್ವಿತ ನ್ಯಾಯಧೀಶರಿಗೆಯೇ ಭದ್ರತೆ ಕೊಡಲಾಗದ ಸರ್ಕಾರಕ್ಕೆ ಅಧಿಕಾರದಲ್ಲಿ ಉಳಿಯುವ ನೈತಿಕತೆ ಇಲ್ಲ ಎಂದಿದ್ದಾರೆ.
ರಾಜ್ಯಪಾಲರು ಶೀಘ್ರ ಕ್ರಮಕೈಗೊಂಡು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.