ನವದೆಹಲಿ: ಭಾರತದಲ್ಲಿ ಆವಿಷ್ಕಾರಗಳನ್ನು ಉತ್ತೇಜಿಸುವ ಸಲುವಾಗಿ ‘ಇನ್ನೋವೇಶನ್ ಸೆಲ್’ನ್ನು ಸ್ಥಾಪಿಸಲು ಮಾನವ ಸಂಪನ್ಮೂಲ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಬುಧವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಅವರು ಈ ವಿಷಯವನ್ನು ಘೋಷಿಸಿದ್ದಾರೆ, ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್ ರ್ಯಾಂಕಿಂಗ್ನಲ್ಲಿ ಭಾರತ 6 ಅಂಕ ಗಳಿಕೆ ಕಂಡ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನೋವೇಶನ್ ಸೆಲ್ ಸ್ಥಾಪನೆ ಮಾಡುವುದರಿಂದ ಆವಿಷ್ಕಾರ ಮತ್ತು ಸಂಶೋಧನಾ ಪ್ರಯತ್ನಗಳತ್ತ ಕೇಂದ್ರಿಕೃತ ಗಮನಹರಿಸುವುದು ಸಾಧ್ಯವಾಗಲಿದೆ ಎಂದು ಜಾವ್ಡೇಕರ್ ಟ್ವಿಟರ್ನಲ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.