ನವದೆಹಲಿ: ಬ್ಯಾಂಕುಗಳಿಗೆ ಸಾಲ ವಂಚಿಸುತ್ತಿರುವ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ 91 ಜನರನ್ನು ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ ವಿಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 91 ಮಂದಿಯ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು,
ಉದ್ದೇಶಪೂರ್ವಕವಾಗಿ ಸಾಲಗಳನ್ನು ವಂಚಿಸಿರುವ ಕಂಪನಿಗಳ ಮಾಲೀಕರು, ನಿರ್ದೇಶಕರು ಸೇರಿದಂತೆ ಇತರರು ಈ ಪಟ್ಟಿಯಲ್ಲಿದ್ದಾರೆ. ಇವರಿಗೆ ವಿದೇಶಕ್ಕೆ ತೆರಳುವುದಕ್ಕೆ ಇನ್ನು ಮುಂದೆ ಅವಕಾಶ ಸಿಕ್ಕುವುದು ಕಷ್ಟ.
ಮೂಲಗಳ ಪ್ರಕಾರ ಸುಮಾರು 400 ಕಂಪನಿಗಳ ಹೆಸರು ಉದ್ದೇಶಪೂರ್ವಕ ಸಾಲ ವಂಚಕರ ಪಟ್ಟಿಯಲ್ಲಿದೆ ಎನ್ನಲಾಗಿದೆ.
ನೀರವ್ ಮೋದಿ ಪ್ರಕರಣ ನಡೆದ ಬಳಿಕ ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಂಚನೆಯನ್ನು ಗಂಭೀರವಾಗಿ ಪರಿಗಣಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.