ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಎಲೆಕ್ಟ್ರಾನಿಕ್ ಮೀಡಿಯಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ ಅವರು ದಿ ವೈರ್ ವೆಬ್ಸೈಟ್ ವಿರುದ್ಧ ಹುಡಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ವೇಳೆ ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾರೆ.
‘ನಾವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುತ್ತೇವೆ ಆದರೆ ಅದಕ್ಕೂ ಜವಾಬ್ದಾರಿ ಇರಬೇಕು. ಒಂದೇ ರಾತ್ರಿಯಲ್ಲಿ ನಾವು ಗುರುವಾಗುತ್ತೇವೆ ಎಂದು ಎಲೆಕ್ಟ್ರಾನಿಕ್ಸ್ ಮಾಧ್ಯಮಗಳು ತಿಳಿದುಕೊಳ್ಳಬಾರದು’ ಎಂದಿದ್ದಾರೆ.
‘ತಮ್ಮ ಮನಸ್ಸಿಗೆ ಬಂದ ಎಲ್ಲವನ್ನೂ ಬರೆಯಬಹುದು ಎಂದು ಹಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ತಿಳಿದುಕೊಂಡಿದೆ. ಪ್ರವಚನ ಫೀಠದಲ್ಲಿ ಕುಳಿತು ಎಲ್ಲವನ್ನು ಬರೆಯಲು ಸಾಧ್ಯವೇ? ಅದು ಪತ್ರಿಕೋದ್ಯಮವೇ? ಎಂದು ಪ್ರಶ್ನಿಸಿದ್ದಾರೆ.
ಒಬ್ಬರ ಬಗ್ಗೆ ಏನೋನೋ ಮಾತನಾಡುವುದು ಸರಿಯಲ್ಲ, ಎಲ್ಲದಕ್ಕೂ ಒಂದು ಮಿತಿ ಎಂಬುದು ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.