ಪಾಟ್ನಾ: ಬಿಹಾರದ ಅರರಿಯಾ ಲೋಕಸಭಾ ಕ್ಷೇತ್ರಕ್ಕೆ ಮಾ.11ರಂದು ನಡೆದ ಉಪಚುನಾವಣೆಯಲ್ಲಿ ಆರ್ಜೆಡಿ ಪಕ್ಷ ಜಯಗಳಿಸಿತ್ತು. ಈ ವೇಳೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಮೂರು ಯುವಕರ ಗುಂಪು ಪಾಕಿಸ್ಥಾನದ ಪರವಾದ ಘೋಷಣೆಗಳನ್ನು ಕೂಗಿತ್ತು.
ಅವರು ಪಾಕ್ ಪರ ಘೋಷಣೆ ಕೂಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ವೀಡಿಯೋದಲ್ಲಿದ್ದ ಇಬ್ಬರನ್ನು ಬಂಧಿಸಲಾಗಿದೆ. ಮೂರನೇಯವನಿಗಾಗಿ ಹುಡುಕಾಟ ಆರಂಭವಾಗಿದೆ.
ಈ ವೀಡಿಯೋ ಹರಿದಾಡುತ್ತಿದ್ದಂತೆ ಅರಾರಿಯಾದ ಸ್ಥಳಿಯರು ಪ್ರತಿಭಟನೆಗಳನ್ನು ನಡೆಸಿದ್ದಾರೆ, ಭಾರತ ವಿರೋಧಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
अररिया लोकसभा सीट सरफराज आलम के जीतने पर पाकिस्तान जिंदाबाद और भारत तेरे टुकड़े होंगे के नारे लगे। pic.twitter.com/9rEtNEdRGx
— Prashant Umrao (@ipumrao) March 15, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.