ನವದೆಹಲಿ: ಝಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್ ಮಂಗಳವಾರ ಘೋಷಣೆ ಮಾಡಿದ್ದಾರೆ.
ಸುಮಾರು 150 ಎಕರೆ ಪ್ರದೇಶದಲ್ಲಿ ರೂ.120 ಕೋಟಿ ವೆಚ್ಚದಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ. ಇಲ್ಲಿ ವೊವನ್ ಸ್ಯಾಕ್ಸ್, ಮೌಲ್ಡೆಡ್ ಫರ್ನಿಚರ್, ನೀರಿನ ಟ್ಯಾಂಕ್, ಬಾಟಲಿ, ಪೈಪ್, ಸೊಳ್ಳೆ ಪರದೆ ಮುಂತಾದ ಪಾಲಿಮರ್ ಉತ್ಪನ್ನಗಳನ್ನು ಉತ್ಪಾದನೆ ಮಾಡುವ ಯೋಜನೆ ಇದೆ.
ಇದರಿಂದ ಪ್ಲಾಸ್ಟಿಕ್ ವಲಯದಲ್ಲಿ ಹೂಡಿಕೆ ಹೆಚ್ಚಲಿದೆ ಮತ್ತು ಸ್ಥಳಿಯರಿಗೆ ಉದ್ಯೋಗ ಅವಕಾಶಗಳೂ ಹೆಚ್ಚಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಈ ಪ್ಲಾಸ್ಟಿಕ್ ಪಾರ್ಕ್ನಿಂದ 6 ಸಾವಿರ ಮಂದಿಗೆ ನೇರ ಉದ್ಯೋಗ ಮತ್ತು 30 ಸಾವಿರ ಮಂದಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.