ನವದೆಹಲಿ: ಕರ್ತವ್ಯ ನಿರ್ವಹಿಸುವ ವೇಳೆ ಹುತಾತ್ಮರಾದ, ವಿಕಲಾಂಗತೆಗೆ ಒಳಗಾದ, ಕಣ್ಮರೆಯಾದ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ.
ಇದುವರೆಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿದ್ದ ರೂ.10,000 ಅನುದಾನವನ್ನು ತೆಗೆದು ಹಾಕಲಾಗಿದ್ದು, ಅವರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಬಟ್ಟೆಬರೆ, ಪುಸ್ತಕ, ಇತರ ಸಾಮಾಗ್ರಿಗಳ ವೆಚ್ಚವೂ ಇದರಲ್ಲಿ ಸೇರಿದೆ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.
ವಾರ್ಷಿಕ 5 ಕೋಟಿ ರೂಪಾಯಿಗಳನ್ನು ಸರ್ಕಾರ ಇದಕ್ಕಾಗಿ ವ್ಯಯ ಮಾಡಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುವ ಹುತಾತ್ಮ ಯೋಧರ ಎಲ್ಲಾ ಮಕ್ಕಳಿಗೂ ಈ ಸೌಲಭ್ಯ ಅನ್ವಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.